
ವಿದೇಶದಿಂದ ಸಚಿವ ಪ್ರಿಯಾಂಕ್ ಖರ್ಗೆ ವಾಪಸ್
Thursday, June 19, 2025
ಲೋಕಬಂಧು ನ್ಯೂಸ್, ಬೆಂಗಳೂರು
ಬೋಸ್ಟನ್, ಸ್ಯಾನ್ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ವಿದೇಶಕ್ಕೆ ತೆರಳಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಮೆರಿಕಾಗೆ ಕ್ಲಿಯರೆನ್ಸ್ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ವಾಪಾಸಾಗುತ್ತಿದ್ದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಿಯಾಂಕ್ ಖರ್ಗೆ ಸುದ್ದಿಗಾರರೊಂದಿಗೆ ಮಾತನಾಡಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಯಶಸ್ಸನ್ನು ಕಟ್ಟಿಹಾಕುತ್ತಿದೆ ಎಂದು ಆರೋಪಿಸಿದರು.