-->
ಸಚಿವ ರಾಮಲಿಂಗ ರೆಡ್ಡಿ ಕೊಲ್ಲೂರು ಭೇಟಿ

ಸಚಿವ ರಾಮಲಿಂಗ ರೆಡ್ಡಿ ಕೊಲ್ಲೂರು ಭೇಟಿ

ಲೋಕಬಂಧು ನ್ಯೂಸ್, ಕುಂದಾಪುರ
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಮತ್ತು ಧರ್ಮಾದಾಯ ಇಲಾಖೆ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮಂಗಳವಾರ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಹಾಗೂ ಆಡಳಿತ ಸಮಿತಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್, ಮುನಿಯಾಲು ಉದಯ ಕುಮಾರ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ರಾಜು ಪೂಜಾರಿ ಮೊದಲಾದವರಿದ್ದರು.


ಪೂರ್ಣಕುಂಭ ಸ್ವಾಗತ
ದೇಗುಲಕ್ಕೆ ಆಗಮಿಸಿದ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪೂರ್ಣಕುಂಭ ದೊಂದಿಗೆ ಸ್ವಾಗತಿಸಲಾಯಿತು.


ಹಿರಿಯ ಅರ್ಚಕ ಡಾ.ನಾರ್ಸಿ ನರಸಿಂಹ ಅಡಿಗ, ಅರ್ಚಕರಾದ ಎನ್. ಸುಬ್ರಮಣ್ಯ ಅಡಿಗ, ಸುರೇಶ್ ಭಟ್, ಸುದರ್ಶನ್ ಜೋಯಿಸ್ ಕೊಲ್ಲೂರು ನೇತೃತ್ವದಲ್ಲಿ ಧಾರ್ಮಿಕ ಪೂಜಾ ವಿಧಿ ನಡೆಸಲಾಯಿತು.


ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವರನ್ನು ಸ್ಮರಣಿಕೆಯೊಂದಿಗೆ ಗೌರವಿಸಲಾಯಿತು.

Ads on article

Advertise in articles 1

advertising articles 2

Advertise under the article