ವಸತಿ ಯೋಜನೆಯಲ್ಲೂ ಮುಸ್ಲಿಂ ಮೀಸಲಾತಿ ಹೆಚ್ಚಳ!
Thursday, June 19, 2025
ಲೋಕಬಂಧು ನ್ಯೂಸ್, ಬೆಂಗಳೂರು
ವಸತಿ ಯೋಜನೆಯಲ್ಲೂ ಮುಸ್ಲಿಮರ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಅಹಮ್ಮದ್ ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದರು.
ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10 ಶೇ. ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು 15 ಶೇ.ಕ್ಕೆ ಏರಿಕೆ ಮಾಡುವ ಸಂಬಂಧ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.