-->
ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಇಲ್ಲ

ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಇಲ್ಲ

ಲೋಕಬಂಧು ನ್ಯೂಸ್, ಬೆಂಗಳೂರು
ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಫಲಾನುಭವಿಗಳ ಪರಿಷ್ಕರಣೆ ಮಾಡುವುದಿಲ್ಲ. ಈಗ ಇರುವಂತೆ ವ್ಯವಸ್ಥೆ ಮುಂದುವರಿಯುತ್ತದೆ ಎಂದು ಮಹಿಳಾ ಮತ್ತು ‌ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ ಸ್ಪಷ್ಟಪಡಿಸಿದ್ದಾರೆ.
ಗೃಹಲಕ್ಷ್ಮಿ ಹಣ ವಿಳಂಬದ ಬಗ್ಗೆ ವಿಧಾನಸೌಧದಲ್ಲಿ ಗುರುವಾರ ಪ್ರತಿಕ್ರಯೆ ನೀಡಿದ ಅವರು, ಗೃಹಲಕ್ಷ್ಮಿ ಹಣ ಬಿಡುಗಡೆಗೆ ಯಾವುದೇ ತಾಂತ್ರಿಕ ಸಮಸ್ಯೆ ಇಲ್ಲ. ಏಪ್ರಿಲ್ ತಿಂಗಳ ವರೆಗೂ ಹಣ ಕ್ಲಿಯರ್ ಆಗಿದೆ.


ಮೇ ತಿಂಗಳು ಮಾತ್ರ ಬಾಕಿ ಇದ್ದು ಪ್ರತಿ ತಿಂಗಳು ಹಣಕಾಸು ಇಲಾಖೆಗೆ ಹಣ ಬಿಡುಗಡೆ ಆಗುತ್ತಿದೆ. ಬಾಕಿ ಹಣ ಬಿಡುಗಡೆ ಮಾಡುತ್ತೇವೆ ಎಂದರು.

Ads on article

Advertise in articles 1

advertising articles 2

Advertise under the article