ಅ.ಕ.ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾಗಿ ಸಂದೀಪ ಮಂಜ

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸಂದೀಪ ಮಂಜ ಅವರನ್ನು 2025-26ನೇ ಸಾಲಿನ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ತಿಳಿಸಿದ್ದಾರೆ.ವಿಪ್ರ ಸಂಘಟನೆಯಲ್ಲಿ ಮಂಜ ಅವರ ಸಾಧನೆಯನ್ನು ಗಮನಿಸಿ ಅವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.