ಕೃಷ್ಣಮಠಕ್ಕೆ ಭೇಟಿ

ಲೋಕಬಂಧು ನ್ಯೂಸ್, ಉಡುಪಿ
ಭಾರತ ಸರಕಾರದ ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ರಾಮಚಂದ್ರನ್ ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರಾಮಚಂದ್ರನ್ ದಂಪತಿಯನ್ನು ಗೌರವಿಸಿದರು.


ಮಠದ ದಿವಾನ ನಾಗರಾಜಾಚಾರ್ಯ, ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮೊದಲಾದವರಿದ್ದರು