
'ಒಂದು ಭೂಮಿ ಒಂದು ಅರೋಗ್ಯ'ಕ್ಕಾಗಿ ವಿಧಾನಸೌಧ ಮೆಟ್ಟಿಲು ಮೇಲೆ ಯೋಗ
Wednesday, June 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜೂ.21ರಂದು 'ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ ವಿಧಾನಸೌಧದ ಮೆಟ್ಟಿಲು ಮೇಲೆ ಯೋಗ ದಿನಾಚರಣೆ ಮಾಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಗ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಹಾಗೂ ಗಣ್ಯರು ಭಾಗವಹಿಸುತ್ತಾರೆ. ಸುಮಾರು 5 ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ.
ಈ ವರ್ಷ ಐದು ಲಕ್ಷ ಜನರಿಗೆ ಯೋಗ ಹೇಳಿಕೊಡಲಾಗುತ್ತದೆ. ರಾಜ್ಯದಲ್ಲಿ 10 ಸಾವಿರ ಯೋಗ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದರು.