-->
ಸಾಂಪ್ರದಾಯಿಕ ಶಿಸ್ತುಬದ್ಧ ಉಡುಪಿ ಉಚ್ಚಿಲ ದಸರಾ ಆಚರಣೆಗೆ ನಿರ್ಧಾರ

ಸಾಂಪ್ರದಾಯಿಕ ಶಿಸ್ತುಬದ್ಧ ಉಡುಪಿ ಉಚ್ಚಿಲ ದಸರಾ ಆಚರಣೆಗೆ ನಿರ್ಧಾರ

ಲೋಕಬಂಧು ನ್ಯೂಸ್, ಪಡುಬಿದ್ರಿ
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ಬಾರಿ 4ನೇ ವರ್ಷದ ಉಡುಪಿ ಉಚ್ಚಿಲ ದಸರಾ ಉತ್ಸವ ಕ್ಷೇತ್ರದ ಸದ್ಭಕ್ತರು ಹಾಗೂ ದಾನಿಗಳ ಸಹಕಾರ ಸಹಯೋಗದೊಂದಿಗೆ ಶಿಸ್ತುಬದ್ಧ ಹಾಗೂ ಸಾಂಪ್ರದಾಯಿಕವಾಗಿ ಜನಾಕರ್ಷಣೆಯ ದಸರಾ ಉತ್ಸವವಾಗಿ ಆಯೋಜಿಸಲು ಸಂಕಲ್ಪಿಸಲಾಗಿದ್ದು, ಎಲ್ಲರೂ ಸಹಕರಿಸುವಂತೆ ಉಚ್ಚಿಲ ದಸರಾ ಗೌರವ ಸಲಹೆಗಾರ ನಾಡೋಜ ಡಾ.ಜಿ.ಶಂಕರ್ ಹೇಳಿದರು.ಜು.6ರಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿದಿನ ಚಂಡಿಕಾ ಯಾಗ, ಕಲ್ಪೋಕ್ತ ಪೂಜೆ, ಸಾಮೂಹಿಕ ಕುಂಕುಮಾರ್ಚನೆ, ಸಾಂಸ್ಕೃತಿಕ ಕಾರ್ಯಕ್ರಮ, ವಿಭಿನ್ನ ರೀತಿಯ ವಸ್ತು ಪ್ರದರ್ಶನದೊಂದಿಗೆ ವೈಭವೋಪೇತ ವಿಸರ್ಜನಾ ಮೆರವಣಿಗೆ ನಡೆಸಲು ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಡುಪಿ ಶಾಸಕ ಯಶಪಾಲ್ ಸುವರ್ಣ, ಉಡುಪಿ ಉಚ್ಚಿಲ ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ದ.ಕ.ಮೊಗವೀರ ಮಹಾಜನ ಸಂಘ ಉಚ್ಚಿಲ ಉಪಾಧ್ಯಕ್ಷ ಮೋಹನ ಬೆಂಗ್ರೆ, ಮಹಾಲಕ್ಷ್ಮೀ ದೇವಸ್ಥಾನ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ್ ಸುವರ್ಣ, ಬಗ್ವಾಡಿ ಹೋಬಳಿ ಮೊಗವೀರ ಮಹಾಜನ ಸೇವಾಸಂಘ ಕುಂದಾಪುರ ಅಧ್ಯಕ್ಷ ಉದಯ ಕುಮಾರ್ ಹಟ್ಟಿಯಂಗಡಿ, ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಪ್ರಮುಖರಾದ ಅನಿಲ್ ಕುಮಾರ್ ಬೊಕ್ಕಪಟ್ಣ, ರತ್ನಾಕರ್ ಸಾಲ್ಯಾನ್, ಸುಜಿತ್ ಸಾಲ್ಯಾನ್, ಹರಿಯಪ್ಪ ಆರ್.ಕೋಟ್ಯಾನ್, ಶ್ರೀಪತಿ ಭಟ್ ಉಚ್ಚಿಲ, ಮನೋಜ್ ಕಾಂಚನ್, ಉಷಾರಾಣಿ ಬೋಳೂರು, ಸುಗುಣ ಎಸ್‌. ಕರ್ಕೇರ ಹಾಗೂ ಆಡಳಿತ ಸಮಿತಿ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಮಹಿಳಾ ಸಂಘಟನೆ ಸದಸ್ಯರು ಇದ್ದರು.ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಸತೀಶ್ ಕುಂದರ್ ಮಲ್ಪೆ ವಂದಿಸಿದರು.

Ads on article

Advertise in articles 1

advertising articles 2

Advertise under the article