200ಕ್ಕೂ ಹೆಚ್ಚು ಅಕ್ರಮ ವಲಸಿಗರ ಗಡಿಪಾರು
Wednesday, July 9, 2025
ಲೋಕಬಂಧು ನ್ಯೂಸ್, ಬೆಂಗಳೂರು
ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 20ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ.
ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂಥವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು.