
50 ಮೌಲಾನ ಆಜಾದ್ ಮಾದರಿ ಶಾಲೆ ತೆರೆಯಲು ಸರ್ಕಾರ ಆದೇಶ
Wednesday, July 9, 2025
ಲೋಕಬಂಧು ನ್ಯೂಸ್, ಬೆಂಗಳೂರು
2024-25ರ ಬಜೆಟ್‌ನಲ್ಲಿ ಘೋಷಿಸಿದ್ದ 100 ಮೌಲಾನಾ ಆಜಾದ್ ಶಾಲೆಗಳ ಪೈಕಿ ಬಾಕಿ 50 ಶಾಲೆಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಆ ಮೂಲಕ ರಾಜ್ಯ ಸರ್ಕಾರ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಮಾತ್ರ ಮೀಸಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ವಸತಿ ಸಹಿತ ಶಿಕ್ಷಣ ಒದಗಿಸಲಾಗುತ್ತದೆ.
ಈಗಾಗಲೇ ಅಲ್ಪಸಂಖ್ಯಾತರಿಗೆ 4 ಶೇ. ಗುತ್ತಿಗೆ ಮೀಸಲಾತಿ, ವಸತಿ ಯೋಜನೆ ಮನೆಗಳಿಗೆ 15 ಶೇ. ಮೀಸಲು ಹೆಚ್ಚಳದ ಬಳಿಕ ಸರ್ಕಾರದ ಈ ಮತ್ತೊಂದು ನಿರ್ಧಾರ ಇದೀಗ ವಿವಾದಕ್ಕೆ ಗುರಿಯಾಗಿದೆ.