
Bengaluru: ದೋಣಿ ದುರಂತ: ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ
Thursday, July 17, 2025
ಲೋಕಬಂಧು ನ್ಯೂಸ್, ಬೆಂಗಳೂರು
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಮೃತರ ಸರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಜು.15ರಂದು ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ ಬಾರದ ವಿಷಯ ಕೇಳಿ ತುಂಬಾ ದುಃಖವಾಯಿತು ಎಂದು ಸಚಿವೆ ಹೆಬ್ಬಾಳ್ಕರ್ ಹೇಳಿದ್ದಾರೆ.
ಈಮಧ್ಯೆ, ಕರಾವಳಿಯಲ್ಲಿ ಎಡೆಬಿಡದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ