
Bengaluru: ಸಚಿವ ಜಮೀರ್ ವಿರುದ್ಧ ದೂರು
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಅಲ್ಪಸಂಖ್ಯಾತ ಇಲಾಖೆಯಲ್ಲಿ ಅನುದಾನ ದುರ್ಬಳಕೆ ಸಂಬಂಧ ಸಚಿವ ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದ್ದು, ದೂರಿನ ಬಗ್ಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಕೆಲವು ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದಾರೆ.
ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದಲ್ಲಿ ಸಚಿವ ಜಮೀರ್‌ಗೆ ಸಂಕಷ್ಟ ಎದುರಾಗಲಿದೆ.
ಸಚಿವ ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಜೆಡಿಎಸ್ ವಕ್ತಾರ ಪ್ರದೀಪ್ ಕುಮಾರ್ ದೂರು ನೀಡಿದ್ದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಲಾವ್ ನೀಡಿದ್ದಾರೆ.