
Bengaluru: ಧರ್ಮಸ್ಥಳ ಸರಣಿ ಹತ್ಯೆ ಆರೋಪ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ರಹಸ್ಯ ಅಂತ್ಯಸಂಸ್ಕಾರ ಪ್ರಕರಣ ಸಂಬಂಧ ರಾಜ್ಯ ಸರಕಾರ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವ್ಯಕ್ತಿಯೋರ್ವ ತಾನು ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಮೃತ ದೇಹಗಳನ್ನು ಹೂತಿರುವುದಾಗಿ ಹೇಳಿಕೆ ದಾಖಲಿಸಿದ ಬೆನ್ನಲ್ಲೇ ಇದೀಗ ನಾಪತ್ತೆ, ಅಸಹಜ ಸಾವುಗಳು ಮತ್ತು ಲೈಂಗಿಕ ದೌರ್ಜನ್ಯಗಳ ಬಗ್ಗೆ ದೂರುಗಳು ದಾಖಲಾಗುತ್ತಿವೆ ಎಂದರು.