Bengaluru: ರಾಜ್ಯ ಕಿರಿಯರ ಕ್ರೀಡಾಕೂಟಕ್ಕೆ ಆಹ್ವಾನ
Thursday, July 31, 2025
ಲೋಕಬಂಧು ನ್ಯೂಸ್, ಬೆಂಗಳೂರು
ಆಗಸ್ಟ್ 23ರಿಂದ 25ರ ವರೆಗೆ ಉಡುಪಿಯಲ್ಲಿ ಕರ್ನಾಟಕ ರಾಜ್ಯ ಕಿರಿಯರ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಕೂಟಕ್ಕೆ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಕ್ರೀಡಾಕೂಟದ ಸಂಘಟನೆ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್ ಗುರುವಾರ ಭೇಟಿಯಾಗಿ ಆಮಂತ್ರಿಸಿದರು.ಈ ಸಂದರ್ಭದಲ್ಲಿ ಕ್ರೀಡಾಕೂಟದ ಸಂಘಟನೆ ಸಮಿತಿ ಕಾರ್ಯದರ್ಶಿ ಮಹೇಶ್ ಠಾಕೂರ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಕಾರ್ಯದರ್ಶಿ ರಾಜವೇಲು, ಖಜಾಂಚಿ ಶ್ರೀಕಾಂತ್, ಜೊತೆ ಕಾರ್ಯದರ್ಶಿ ಉಮೇಶ್ ಹಾಗೂ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ದಿನೇಶ್ ಕುಮಾರ್ ಇದ್ದರು.