ಲೋಕಬಂಧು ನ್ಯೂಸ್, ಉಡುಪಿ
ಆಷಾಢ ಶುದ್ಧ ಏಕಾದಶಿಯಂದು ಭಾನುವಾರ ಪಲಿಮಾರು ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರಿಪಾದರು ಬೆಂಗಳೂರಿನ ಮಲ್ಲೇಶ್ವರಂ ಪಲಿಮಾರು ಮಠದಲ್ಲಿ ತಪ್ತ ಮುದ್ರಾಧಾರಣೆ ಮಾಡಿದರು.
ಬಳಿಕ ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನ ವಿವಿಧೆಡೆಗಳಲ್ಲಿ ಭಕ್ತರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.