ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತು ಹಾಕಿದ್ದೆ ಎಂದ ವ್ಯಕ್ತಿಯಿಂದ ಠಾಣೆಗೆ ದೂರು ಸಲ್ಲಿಕೆ
Friday, July 4, 2025
ಲೋಕಬಂಧು ನ್ಯೂಸ್, ಮಂಗಳೂರು
ಧರ್ಮಸ್ಥಳ ಗ್ರಾಮದಲ್ಲಿ ಹಲವು ಹೆಣ ಹೂತು ಹಾಕಿದ್ದ ವ್ಯಕ್ತಿಯೊಬ್ಬ ತಾನು ಪೊಲೀಸ್ ಠಾಣೆಗೆ ಶರಣಾಗಿ ಎಲ್ಲ ವಿಚಾರ ಬಹಿರಂಗಪಡಿಸುವುದಾಗಿ ಹೇಳಿದ್ದ ಪತ್ರ ಇತ್ತೀಚೆಗೆ ಬಹಿರಂಗವಾಗಿತ್ತು. ಅದರಂತೆ ಇದೀಗ ಆ ವ್ಯಕ್ತಿಯಿಂದ ಪೊಲೀಸ್ ಅಧೀಕ್ಷಕರ ಕಚೇರಿ ಮತ್ತು ಧರ್ಮಸ್ಥಳ ಠಾಣೆಗೆ ದೂರು ಸಲ್ಲಿಕೆಯಾಗಿದೆ.ದೂರು ಸ್ವೀಕರಿಸಲಾಗಿದ್ದು, ಆ ಬಗ್ಗೆ ವಿಚಾರಣೆ ನಡೆಸಿ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಆ ವ್ಯಕ್ತಿ ಸುಮಾರು 6 ಪುಟಗಳ ಸುಧೀರ್ಘ ದೂರು ನೀಡಿದ್ದು, ಅದರಲ್ಲಿ ಬೆಚ್ಚಿ ಬೀಳಿಸುವ ಹಲವಾರು ಭಯಾನಕ ವಿಚಾರಗಳಿವೆ.