ಜನೌಷಧ ಕೇಂದ್ರ ಸ್ಥಗಿತಕ್ಕೆ ಕೋರ್ಟ್ ತಡೆ
Wednesday, July 9, 2025
ಲೋಕಬಂಧು ನ್ಯೂಸ್, ಬೆಂಗಳೂರು
ಕರ್ನಾಟಕದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.ಸರ್ಕಾರಿ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಸದಕ್ಕೆ ಭಾರಿ ವೀರೋಧ ವ್ಯಕ್ತವಾಗಿತ್ತು.
ಸರ್ಕಾರದ ಈ ಕ್ರಮ ಪ್ರಶ್ನಿಸಿ 16 ಮಂದಿ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ, ಮುಂದಿನ ವಿಚಾರಣೆ ವರೆಗೂ ಜನೌಷಧ ಕೇಂದ್ರ ಸ್ಥಗಿತ ಬೇಡ ಎಂದು ಮಧ್ಯಂತರ ಆದೇಶ ಹೊರಡಿಸಿದೆ.