
degree ಕಾಲೇಜು, ವಿ.ವಿಗಳಲ್ಲಿ ಸಿಸಿ ಟಿವಿ ಕಣ್ಗಾವಲು
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಕ್ಯಾಂಪಸ್‌ಗಳಲ್ಲಿ ಸಿಸಿ ಟಿವಿ ಅಳವಡಿಸುವಂತೆ ಸರ್ಕಾರ ಆದೇಶ ಮಾಡಿದೆ.
ಕಾಲೇಜು, ವಿ.ವಿ. ಕ್ಯಾಂಪಸ್‌ಗಳಲ್ಲಿ ರ್ಯಾಗಿಂಗ್, ಡ್ರಗ್ಸ್ ಚಟುವಟಿಕೆ, ಲೈಂಗಿಕ ಕಿರುಕುಳ ಪ್ರಕರಣ ಜಾಸ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ಉನ್ನತ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಮಾಡಿದೆ.
ಕಾಲೇಜುಗಳಲ್ಲಿ ಲಭ್ಯ ಇರುವ ಅನುದಾನದಲ್ಲಿ ಜು.21ರ ಒಳಗೆ ಸಿಸಿ ಟಿವಿ ಅಳವಡಿಸಿ, ಇಲಾಖೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.