
ಜೆಡಿಎಸ್ ಪಕ್ಷ ಸಂಘಟನೆಗೆ ಒತ್ತು
Monday, July 7, 2025
ಲೋಕಬಂಧು ನ್ಯೂಸ್, ಉಡುಪಿ
ಮುಂದಿನ ದಿನಗಳಲ್ಲಿ ಜಾತ್ಯತೀತ ಜನತಾ ದಳ (ಜೆಡಿಎಸ್)ಕ್ಕೆ ಉತ್ತಮ ಭವಿಷ್ಯವಿದ್ದು, ಪಕ್ಷವನ್ನು ಬಲಪಡಿಸಬೇಕು. ಮತ್ತೊಮ್ಮೆ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವಲ್ಲಿ ಕಾರ್ಯಕರ್ತರು ಸಹಕರಿಸಬೇಕು ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ ಶೆಟ್ಟಿ ಬಾಲಾಜಿ ಹೇಳಿದರು.
ಜೆಡಿಎಸ್ ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಖಂಡಿತ ಯಶಸ್ಸು ಸಿಗಲಿದೆ. ಮುಂದೆ ನಡೆಯುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಿಗೆ ಸನ್ನದ್ಧರಾಗಬೇಕು.
ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿ ಮಾಡುವಲ್ಲಿ ಗಮನ ನೀಡಬೇಕು. ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.
ಪಕ್ಷ ಪ್ರಮುಖರಾದ ಜಯರಾಮ ಆಚಾರ್ಯ, ವಾಸುದೇವ ರಾವ್ ಮೊದಲಾದವರಿದ್ದರು.