
ಕ್ಷಮೆ ಕೇಳಿದ Facebook
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
'ಮೆಟಾ' ವೇದಿಕೆಗಳಲ್ಲಿ ಕನ್ನಡ ಸ್ವಯಂ ಅನುವಾದದ ವೇಳೆ ಭಾರಿ ಲೋಪ ಹಾಗೂ ನೈಜ ಅರ್ಥವೇ ನಾಶವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಫೇಸ್‌ಬುಕ್ ಮಾತೃ ಸಂಸ್ಥೆ ಮೆಟಾ ಕ್ಷಮೆ ಯಾಚಿಸಿದೆ.
ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಈ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.
ಮೆಟಾ ವೇದಿಕೆಯಲ್ಲಿ ಅನುವಾದ ದೋಷದ ಬಗ್ಗೆ ಸಿಎಂ ತನ್ನ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.