
Govt.ಶಾಲೆಗಳಲ್ಲಿ ಭಗವದ್ಗೀತೆ ಪಠಣ ಕಡ್ಡಾಯ
Friday, July 18, 2025
ಲೋಕಬಂಧು ನ್ಯೂಸ್, ಡೆಹ್ರಾಡೂನ್
ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಇನ್ನು ಮುಂದೆ ಭಗವದ್ಗೀತೆ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಶಾಲೆಗಳಲ್ಲಿ ಬೆಳಿಗ್ಗೆ ಭಗವದ್ಗೀತೆಯ ಶ್ಲೋಕಗಳನ್ನು ವಿದ್ಯಾರ್ಥಿಗಳು ಪಠಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಅಲ್ಲದೆ, ಒಂದು ಶ್ಲೋಕವನ್ನು ವಾರದ ಶ್ಲೋಕ ಎಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್‌ನಲ್ಲಿ ಬರೆಯುವಂತೆ ಕೇಳಲಾಗಿದೆ.
ರಾಜ್ಯ ಪಠ್ಯಕ್ರಮಕ್ಕೆ ಸಂಬಂಧಿಸಿ ಮೇ 6ರಂದು ನಡೆದ ಸಭೆಯಲ್ಲಿ ಸಿಎಂ ಪುಷ್ಕರ್ ಸಿಂಗ್ ಧಾಮಿ ಭಗವದ್ಗೀತೆ, ರಾಮಾಯಣವನ್ನು ಪಠ್ಯದಲ್ಲಿ ಸೇರಿಸಲು ಸೂಚನೆ ನೀಡಿದ್ದರು.