Heavy rain: ಭಾರಿ ಮಳೆ: ಮೂಡುಬಿದಿರೆ, ಮೂಲ್ಕಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
Wednesday, July 23, 2025
ಲೋಕಬಂಧು ನ್ಯೂಸ್, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡುಬಿದಿರೆ ಮತ್ತು ಮೂಲ್ಕಿ ತಾಲೂಕುಗಳಲ್ಲೂ ಜು.24ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಹವಾಮಾನ ಇಲಾಖೆ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ 3 ದಿನ ರೆಡ್ ಅಲರ್ಟ್ ಘೋಷಿಸಿದ್ದು, ಈಗಾಗಲೇ ಉತ್ತಮ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡುಬಿದಿರೆ ಹಾಗೂ ಮೂಲ್ಕಿ ತಾಲೂಕು ವ್ಯಾಪ್ತಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಆಯಾ ತಹಸೀಲ್ದಾರರು ಆದೇಶಿಸಿದ್ದಾರೆ.