.jpg)
ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ
Friday, July 4, 2025
ಲೋಕಬಂಧು ನ್ಯೂಸ್, ಉಡುಪಿ
ಸಾರ್ವತ್ರಿಕವಾಗಿ ಕಣ್ಣಿನ ಆರೋಗ್ಯ ಉತ್ತಮಗೊಳಿಸುವ ನಿಟ್ಟಿನಲ್ಲಿ ನಿರಂತರ ಸಮಗ್ರ ಕಣ್ಣಿನ ಆರೈಕೆಗಾಗಿ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರವನ್ನು ಜಿಲ್ಲಾ ಸರ್ಜನ್ ಡಾ.ಅಶೋಕ್ ಎಚ್. ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಜ್ಯೋತ್ಸ್ನ್ಯಾ ಬಿ.ಕೆ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಸಿಬ್ಬಂದಿ ಮೊದಲಾದವರಿದ್ದರು.
ಶಾಶ್ವತ ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಕಣ್ಣಿನ ಸಮಸ್ಯೆ ಇರುವ ಸಾರ್ವಜನಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೃಷ್ಟಿ ದೋಷವಿರುವ ಅರ್ಹ ಫಲಾನುಭವಿಗಳಿಗೆ ದೃಷ್ಟಿ ಕೇಂದ್ರಗಳಲ್ಲಿಯೇ ಚಿಕಿತ್ಸೆ, ಕನ್ನಡಕ ವಿತರಣೆ ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಡಾ.ಅಶೋಕ್ ತಿಳಿಸಿದರು.