.jpg)
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ
Friday, July 4, 2025
ಲೋಕಬಂಧು ನ್ಯೂಸ್, ಉಡುಪಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ 2 ವರ್ಷದಿಂದ ಜನರಿಗೆ ಉತ್ತಮ, ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು ಎಲ್ಲ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಿತಿ ಮೀರಿದೆ ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಆರೋಪಿಸಿದರು.
ಜೆಡಿಎಸ್ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.
ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರು ಮಾಡಿದ ಆರೋಪಗಳು ಸರಕಾರದ ಕಾರ್ಯವೈಖರಿಗೆ ಸಾಕ್ಷಿಯಾಗಿದೆ. ಮೂಲಭೂತ ಸೌಲಭ್ಯ ಒದಗಿಸಿಲ್ಲ. ಗುತ್ತಿಗೆದಾರರ ಬಾಕಿ ಪಾವತಿಯಾಗಿಲ್ಲ. ಭ್ರಷ್ಟಾಚಾರ ಆರೋಪ ಹೊತ್ತ ಸಚಿವ ಜಮೀರ್ ಅಹಮದ್ ಅವರನ್ನು ಸಚಿವ ಸಂಪುಟದಿಂದ ಕೂಡಲೇ ವಜಾಗೊಳಿಸಬೇಕು ಎಂದರು.
ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ವಾಸುದೇವ ರಾವ್, ರಾಜ್ಯ ಕಾರ್ಯದರ್ಶಿ ಸುಧಾಕರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಜೆಡಿಎಸ್ ಜಿಲ್ಲಾ ಮಾಜಿ ಅಧ್ಯಕ್ಷ ದಕ್ಷತ್ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಗಂಗಾಧರ ಬಿರ್ತಿ, ಉದಯ ಹೆಗ್ಡೆ, ನಾಯಕರಾದ ಚಂದ್ರಹಾಸ ಎರ್ಮಾಳ್, ಬ್ಲಾಕ್ ಅಧ್ಯಕ್ಷರಾದ ಸಂದೇಶ್ ಭಟ್, ಶ್ರೀಕಾಂತ್ ಹೆಬ್ರಿ, ದೇವರಾಜ್ ತೊಟ್ಟಂ, ಯುವ ಜನತಾದಳ ಅಧ್ಯಕ್ಷ ಸಂಜಯ್ ಕುಮಾರ್, ನಾಯಕರಾದ ಭರತ್ ಶೆಟ್ಟಿ ರಮೇಶ್ ಕುಂದಾಪುರ, ಮನ್ಸೂರ್ ಇಬ್ರಾಹಿಂ, ಹುಸೇನ್ ಹೈಕಾಡಿ, ಸುರೇಶ್ ದೇವಾಡಿಗ, ರಾಮ ರಾವ್, ವೆಂಕಟೇಶ್ ಪಡುಬಿದ್ರಿ, ಮೊಹಮ್ಮದ್, ವಿನ್ಸೆಂಟ್ ಸುನಿಲ್, ರಂಗ ಕೋಟ್ಯಾನ್, ಅಶ್ರಫ್ ಪಡುಬಿದ್ರಿ, ಗುರುರಾಜ್ ಶೆಟ್ಟಿ, ಉಮಾನಾಥ ಶೆಟ್ಟಿ ಶಂಸುದ್ದೀನ್ ಮಜೂರು, ಮಧುಕರ್ ಅಂಬಲಪಾಡಿ, ಸುರೇಶ್ ಉಡುಪಿ, ಪ್ರವೀಣ್ ಎರ್ಮಾಳ್, ಪ್ರಸಾದ್ ಪೂಜಾರಿ ಇದ್ದರು.
ಬಳಿಕ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.