Karkala: ಜು.26: ಜ್ಞಾನಸುಧಾ ಮೌಲ್ಯಸುಧಾ 38ರಲ್ಲಿ 'ಕಾರ್ಗಿಲ್ ವಿಜಯ ದಿವಸ್'
Friday, July 25, 2025
ಲೋಕಬಂಧು ನ್ಯೂಸ್, ಕಾರ್ಕಳ
ಇಲ್ಲಿನ ಗಣಿತನಗರದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಸಹಯೋಗದಲ್ಲಿ ನಡೆಯುವ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ 38ನ್ನು ಕಾರ್ಗಿಲ್ ವಿಜಯ ದಿವಸದ ಶುಭ ಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರಂದು ಅಪರಾಹ್ನ 3.30ಕ್ಕೆ ನಡೆಯಲಿದೆ.
ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಅಕ್ಷಯ ಗೋಖಲೆ `ಬಹುರತ್ನ ಪ್ರಸವೀ ಭಾರತೀ' ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಆಸಕ್ತರಿಗೆ ಮುಕ್ತ ಪ್ರವೇಶವಿದೆ ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ.