
Kateel: ಕಟೀಲಿಗೆ ಗಾಲಿ ಜನಾರ್ದನ ರೆಡ್ಡಿ ಭೇಟಿ
Thursday, July 17, 2025
ಲೋಕಬಂಧು ನ್ಯೂಸ್, ಕಟೀಲು
ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಬುಧವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಜನಾರ್ದನ ರೆಡ್ಡಿ ಪುತ್ರ ಗಾಲಿ ಕಿರೀಟಿ ರೆಡ್ಡಿ, ತೆಲುಗು ನಟಿ ಶ್ರೀಲೀಲಾ ಅವರೊಂದಿಗೆ ತಯಾರಿಸಿದ ಕನ್ನಡ ಮತ್ತು ತೆಲುಗು ದ್ವಿಭಾಷಾ ಚಿತ್ರ 'ಜೂನಿಯರ್' ಜು.18 ರಂದು ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಪ್ರಾರ್ಥಿಸಲು ಕಟೀಲು ದೇಗುಲಕ್ಕೆ ಭೇಟಿ ನೀಡಿದರು.
ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ ಹಾಗೂ ಶ್ರೀಹರಿನಾರಾಯಣದಾಸ ಆಸ್ರಣ್ಣ ದೇವಿಯ ಪ್ರಸಾದ ನೀಡಿದರು.
ರಾಜ್ಯ ಸಚಿವನಾಗಿದ್ದಾಗ ನೀಡಿದ ಅನುದಾನದಲ್ಲಿ ಕಟೀಲಿನಲ್ಲಿ ಯಾತ್ರಿ ನಿವಾಸ ಆಗಿರುವುದನ್ನು ನೆನಪಿಸಿಕೊಂಡ ರೆಡ್ಡಿ, ಇಲ್ಲಿ ಚಂಡಿಕಾ ಹೋಮ ಮೊದಲಾದ ಸೇವೆ ಸಲ್ಲಿಸಿರುವುದನ್ನು ಸ್ಮರಿಸಿದರು.
ಸುತ್ತಲೂ ನಂದಿನಿ ನದಿ ಹರಿಯುತ್ತಿರುವ ಈ ಕ್ಷೇತ್ರ ಮನಸ್ಸಿಗೆ ನೆಮ್ಮದಿ ಕೊಡುತ್ತದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ ಜೊತೆಗಿದ್ದರು.