-->
Kaup: ಉತ್ತಮ ಜೀವನ ಶೈಲಿಯಿಂದ ರೋಗಗಳಿಂದ ದೂರ

Kaup: ಉತ್ತಮ ಜೀವನ ಶೈಲಿಯಿಂದ ರೋಗಗಳಿಂದ ದೂರ

ಲೋಕಬಂಧು ನ್ಯೂಸ್, ಕಾಪು
ಉತ್ತಮವಾದ ಆಹಾರ ಸೇವನೆ ಮತ್ತು ಜೀವನ ಶೈಲಿಯಿಂದ ರೋಗಗಳಿಂದ ದೂರವುಳಿಯಬಹುದು ಎಂದು ಕುಂತಳನಗರ ಸಂತ ಅಂತೋನಿ ಚರ್ಚ್ ಧರ್ಮಗುರು ಸ್ಟ್ಯಾನ್ಲಿ ಲೋಬೊ ಹೇಳಿದರು.
ರೋಟರಿ ಕ್ಲಬ್ ಮಣಿಪುರ, ಜಯಂಟ್ಸ್  ಗ್ರೂಪ್ ಆಫ್ ಬ್ರಹ್ಮಾವರ, ರೆಡ್ ಕ್ರಾಸ್‌ ಕುಂದಾಪುರ, ಬ್ಲಡ್ ಬ್ಯಾಂಕ್ ಲೊಂಬಾರ್ಡ್ ಆಸ್ಪತ್ರೆ (ಮಿಷನ್ ಆಸ್ಪತ್ರೆ) ಹಾಗೂ ಕುಂತಳನಗರ ಸಂತ ಅಂತೋನಿ ಚರ್ಚ್ ಸಂಯುಕ್ತ ಆಶ್ರಯದಲ್ಲಿ ಚರ್ಚ್ ಸಭಾಂಗಣದಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.


ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಈ ನಿಟ್ಟಿನಲ್ಲಿ ಇಂಥ ಶಿಬಿರಗಳು ಆರೋಗ್ಯ ತಪಾಸಣೆಗೆ ಅನುಕೂಲ ಎಂದರು.


ಮುಖ್ಯ ಅತಿಥಿಗಳಾಗಿ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಅಧ್ಯಕ್ಷ ಜಯಕರ ಶೆಟ್ಟಿ, ಚರ್ಚ್ ಉಪಾಧ್ಯಕ್ಷ ಸ್ಟ್ಯಾನಿ ಡಿ'ಸೋಜ, ರೋಟರಿ ಕ್ಲಬ್ ಮಣಿಪುರ ಅಧ್ಯಕ್ಷ ರಾಜೇಶ್ ನಾಯ್ಕ, ಕಾರ್ಯದರ್ಶಿ ಎ.ಜಿ. ಡಿ'ಸೋಜ, ವೈದ್ಯರಾದ ಡಾ.ಅರ್ಜುನ ಬಲ್ಲಾಳ್, ಡಾ.ಪವಿತ್ರಾ ಮತ್ತು ಡಾ. ವೈಭವ್, ಜಯಂಟ್ಸ್ ಅಧ್ಯಕ್ಷ ಅಣ್ಣಯ್ಯ ದಾಸ್, ಸುಂದರ ಪೂಜಾರಿ ಮೂಡುಕುಕ್ಕುಡೆ, ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ ಹೇರೂರು ಮೊದಲಾದವರಿದ್ದರು.


ರೋಟರಿ ಮಾಜಿ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಸ್ವಾಗತಿಸಿ, ನಿರೂಪಿಸಿದರು. ಆಶಾ ಸಿಕ್ವೇರ ವಂದಿಸಿದರು.

Ads on article

Advertise in articles 1

advertising articles 2

Advertise under the article