
ಕುಂಜಾಲು ಗೋಹತ್ಯೆ ಪ್ರಕರಣ ಪೂರ್ವ ನಿಯೋಜಿತ ಕೃತ್ಯ ಶಂಕೆ
Saturday, July 5, 2025
ಲೋಕಬಂಧು ನ್ಯೂಸ್, ಉಡುಪಿ
ಬ್ರಹ್ಮಾವರ ಸಮೀಪದ ಕುಂಜಾಲಿನಲ್ಲಿ ಪತ್ತೆಯಾದ ದನದ ರುಂಡ ಹಾಗೂ ಗೋಹತ್ಯೆ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂಬ ಸಂದೇಹ ಮೂಡಿದ್ದು, ಅದರಲ್ಲಿ ಸಂಘಪರಿವಾರದ ಕೈವಾಡ ಇದೆ ಎಂದು ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ಆರೋಪಿಸಿದರು.
ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಘಟನೆ ನಡೆದ ಸಂದರ್ಭದಲ್ಲಿ ಪೊಲೀಸರ ತನಿಖೆಗೆ ಮುಂಚೆಯೇ ಅದನ್ನು ಒಂದು ಸಮುದಾಯದವರೇ ಮಾಡಿದ್ದಾರೆ ಎಂಬ ರೀತಿಯಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ, ಘಟನಾ ಸ್ಥಳಕ್ಕೆ ಹೋಗಿ ಹೇಳಿಕೆ ನೀಡಿ ಸೌಹಾರ್ದತೆ ಕೆಡಿಸುವ ಪ್ರಯತ್ನ ಮಾಡಿದ್ದರು.
ಪೊಲೀಸರು ಆರೋಪಿಗಳನ್ನು ಬಂಧಿಸಿದ ನಂತರವೂ ಉಡುಪಿಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್'ವೆಲ್ ಪ್ರಕರಣದ ಹಿಂದೆ ಮುಸ್ಲಿಮರಿದ್ದಾರೆ ಎಂಬ ಹೇಳಿಕೆ ನೀಡಿ ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನ ಮಾಡಿದರು.
ಇದನ್ನೆಲ್ಲ ಗಮನಿಸುವಾಗ ಈ ಕೃತ್ಯದ ಹಿಂದೆ ಸಂಘಪರಿವಾರದವರು ಇದ್ದು, ಪ್ರಕರಣ ಪೂರ್ವಯೋಜಿತವೇ ಎಂಬುದು ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ, ಜಿಲ್ಲಾ ಉಪಾಧ್ಯಕ್ಷ ಹನೀಫ್ ಮೂಳೂರು, ಉಡುಪಿ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವ ಹಾಗೂ ಕ್ಷೇತ್ರ ಸಮಿತಿ ಉಪಾಧ್ಯಕ್ಷ ರಹೀಮ್ ಆದಿ ಉಡುಪಿ ಉಪಸ್ಥಿತರಿದ್ದರು.