ಕಾರ್ಮಿಕ ಸಂಹಿತೆ ಜಾರಿ ಬೇಡ
Thursday, July 10, 2025
ಲೋಕಬಂಧು ನ್ಯೂಸ್, ಉಡುಪಿ
ಕೇಂದ್ರ ಸರ್ಕಾರ ಉದ್ದೇಶಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸದಂತೆ ಆಗ್ರಹಿಸಿ ಬುಧವಾರ ನಡೆದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಪ್ರತಿಭಟನೆ ನಡೆಯಿತು.ನಗರದ ಕೆಎಸ್ಆರ್.ಟಿ.ಸಿ ಹಳೆ ಬಸ್ ನಿಲ್ದಾಣ ಬಳಿಯ ಸಿಐಟಿಯು ಕಚೇರಿಯಿಂದ ಪ್ರಧಾನ ಅಂಚೆ ಕಚೇರಿ ವರೆಗೆ ಕಾರ್ಮಿಕರು ಮೆರವಣಿಗೆ ನಡೆಸಿದರು.
ಅಂಚೆ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಾರ್ಮಿಕ ಸಂಹಿತೆಗಳ ವಿರುದ್ಧದ ಹೋರಾಟ ಕಾರ್ಮಿಕರ ಅಳಿವು- ಉಳಿವಿನ ಹೋರಾಟವಾಗಿದೆ. ಇಂದು ಮಾಲೀಕರ ಲಾಭದ ಪಾಲು ಹೆಚ್ಚಾಗಿದೆ. ಕಾರ್ಮಿಕರ ವೇತನದ ಪಾಲು ಕಡಿಮೆಯಾಗಿದೆ ಎಂದರು.
ಬ್ಯಾಂಕ್ ನೌಕರರ ಸಂಘದ ಮುಖಂಡ ನಾಗೇಶ್ ಮಾತನಾಡಿ, ರೈತರು ದೇಶದ ಬೆನ್ನೆಲು ಎನ್ನುತ್ತಾರೆ. ಆದರೆ, ಈಗಿನ ಕೇಂದ್ರ ಸರ್ಕಾರ ರೈತರನ್ನು ದಮನಿಸಲು ಹೊರಟಿದೆ ಎಂದರು.