
liqour ದರ ಆಂಧ್ರದಲ್ಲಿ ಭಾರೀ ಇಳಿಕೆ
Friday, July 18, 2025
ಲೋಕಬಂಧು ನ್ಯೂಸ್, ಅಮರಾವತಿ
ಕರ್ನಾಟಕದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕಾಗಿ ಮದ್ಯದ ದರ ಏರಿಕೆ ಮಾಡುತ್ತಿದ್ದರೆ, ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂ.ಯಿಂದ 100 ರೂ.ವರೆಗೆ ಕಡಿತಗೊಳಿಸಿದೆ.
ಈ ಕುರಿತು ಅಧಿಕಾರಿಗಳ ಜೊತೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು, ಮದ್ಯ ನೀತಿಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಂಡು ಕೈಗೆಟುಕುವ ದರದಲ್ಲಿ ಅದನ್ನು ಪೂರೈಕೆ ಮಾಡಿ. ಜೊತೆಗೆ ನಕಲಿ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಎಂದು ಸೂಚಿಸಿದ್ದಾರೆ.