.jpg)
ಕೃಷ್ಣ ಮಠದಲ್ಲಿ ಮಹಾಭಿಷೇಕ ಸಂಪನ್ನ
Saturday, July 5, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ವತಿಯಿಂದ ಆಷಾಢ ಶುದ್ಧ ದಶಮಿ ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವಾರ್ಷಿಕ ಮಹಾಭಿಷೇಕ ನಡೆಯಿತು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ಸೀಯಾಳ ಅಭಿಷೇಕ ನಡೆಸಿದರು.
ಜುಲೈ 6ರಂದು ಭಾನುವಾರ ತಪ್ತ ಮುದ್ರಾಧಾರಣೆ ನಡೆಯಲಿದೆ.
ಪ್ರಥಮೈಕಾದಶಿ ಹಿನ್ನೆಲೆಯಲ್ಲಿ ಕೃಷ್ಣಮಠದಲ್ಲಿ ಭೋಜನ ಪ್ರಸಾದ ಇರುವುದಿಲ್ಲ ಎಂದು ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.