Mangaluru: ಭಾರಿ ಮಳೆ:ದ.ಕ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
Thursday, July 24, 2025
ಲೋಕಬಂಧು ನ್ಯೂಸ್, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜುಲೈ 25ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.ಜಿಲ್ಲೆಯ ಎಲ್ಲಾ ಅಂಗನವಾಡಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಾಳೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.