
Manipal: ವೇಶ್ಯಾವಾಟಿಕೆ: ವ್ಯಕ್ತಿಯ ಬಂಧನ
Thursday, July 17, 2025
ಲೋಕಬಂಧು ನ್ಯೂಸ್, ಮಣಿಪಾಲ
ಹೆರ್ಗ ಗ್ರಾಮದ ಈಶ್ವರನಗರದ ಅಪಾರ್ಟ್‌ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ.
ಮಾಲಸಾ ಎಮರಾಲ್ಡ್ ಅಪಾರ್ಟ್‌ಮೆಂಟ್'ನ ಮೊದಲನೇ ಮಹಡಿಯಲ್ಲಿನ ರೂಮ್ ನಂ.103ರ ಮನೆಯಲ್ಲಿ ಮಹಿಳೆಯನ್ನು ಬಲವಂತವಾಗಿರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ಮಾಡಿದ ಮಣಿಪಾಲ ಪೊಲೀಸರು ಆರೋಪಿ ಹೊನ್ನಾವರ ತಾಲೂಕಿನ ಜಲವಳ್ಳಿಯ ಗಣೇಶ್ ಗಣಪ ನಾಯ್ಕ್ (38)ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ.