
ವಡೋದರಾ ಸೇತುವೆ ಕುಸಿದು ಮೃತಪಟ್ಟವರಿಗೆ ಮೋದಿ ಸಂತಾಪ
Wednesday, July 9, 2025
ಲೋಕಬಂಧು ನ್ಯೂಸ್, ನವದೆಹಲಿ
ಗುಜರಾತಿನಲ್ಲಿ ಸೇತುವೆ ಕುಸಿದು 11 ಜನ ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಅವರ ಕುಟುಂಬಗಳಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆ ನೀಡಿದೆ.
ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
ಗುಜರಾತ್‌ನಲ್ಲಿ ಸೇತುವೆ ಕುಸಿದು ಸಂಭವಿಸಿದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ ಎಂದು ಪ್ರಧಾನಿ ಕಚೇರಿ ಪೋಸ್ಟ್ ಮಾಡಿದೆ.