
Mysore: ಧರ್ಮಸ್ಥಳ ಪ್ರಕರಣ: ಸದ್ಯಕ್ಕೆ ಎಸ್‌ಐಟಿ ರಚನೆ ಇಲ್ಲ
Friday, July 18, 2025
ಲೋಕಬಂಧು ನ್ಯೂಸ್, ಮೈಸೂರು
ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಶವ ಪ್ರಕರಣದ ತನಿಖೆಗೆ ಸದ್ಯಕ್ಕೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಹೇಳಿದರೆಂದು ಎಸ್‌ಐಟಿ ರಚನೆ ಮಾಡಲು ಸಾಧ್ಯವಿಲ್ಲ. ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದರೆ ಎಸ್‌ಐಟಿ ರಚನೆ ಮಾಡುತ್ತೇವೆ.
ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡುವುದಿಲ್ಲ . ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ ಎಂದರು.
ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ಬಿಜೆಪಿ ಟೀಕೆಗೆ ಟಾಂಗ್ ನೀಡಿದ ಸಿಎಂ, ಸರ್ಕಾರದ ಸಾಧನೆ ಜನರಿಗೆ ತಿಳಿಸಲು ಸಮಾವೇಶ ಮಾಡುತ್ತಿದ್ದೇವೆ ಎಂದರು.