
New Delhi: ದ್ವೇಷ ಭಾಷಣಗಳಿಗೆ ಕಡಿವಾಣ ಹಾಕಿ
Friday, July 18, 2025
ಲೋಕಬಂಧು ನ್ಯೂಸ್, ನವದೆಹಲಿ
ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿ ವಿಚಾರಣೆ ಸಂದರ್ಭ ಸುಪ್ರೀಂ ಈ ರೀತಿಯ ಸೂಚನೆ ನೀಡಿದೆ.
ನ್ಯಾ.ಬಿ.ವಿ. ನಾಗರತ್ನ ಮತ್ತು ನ್ಯಾ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ದ್ವೇಷ ಮೂಡಿಸುವ ಭಾಷಣಗಳು ಅಸಮರ್ಪಕ ಎಂದು ಜನರಿಗೆ ಯಾಕೆ ಅನಿಸುತ್ತಿಲ್ಲ? ಇಂಥ ಕೆಲವು ಭಾಷಣಗಳಿಗೆ ನಿಯಂತ್ರಣ ಇರಬೇಕು. ಜನರು ಅಂಥ ದ್ವೇಷದ ಭಾಷಣ ಹಂಚಿಕೊಳ್ಳುವುದು ಮತ್ತು ಲೈಕ್ ಮಾಡುವುದನ್ನು ನಿರ್ಬಂಧಿಸಬೇಕು ಎಂದು ಹೇಳಿದೆ.