New Delhi: ಧನಕರ್ ರಾಜೀನಾಮೆ: ಕಾಂಗ್ರೆಸ್ ಸಂದೇಹ
Wednesday, July 23, 2025
ಲೋಕಬಂಧು ನ್ಯೂಸ್, ನವದೆಹಲಿ
ಉಪರಾಷ್ಟ್ರಪತಿ ಜಗದೀಪ್ ಧನಕರ್ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅನಾರೋಗ್ಯದ ಕಾರಣವನ್ನೂ ನೀಡಿದ್ದಾರೆ. ಆದರೆ, ಕಾಂಗ್ರೆಸ್ ಈ ಬಗ್ಗೆ ಅನುಮಾನ ಹೊಂದಿದೆ.ಇನ್ನೂ ಎರಡೂವರೆ ವರ್ಷ ಸೇವಾವಧಿ ಇದ್ದರೂ ದಿಢೀರ್ ರಾಜೀನಾಮೆ ನೀಡಿರುವುದು ಕಾಂಗ್ರೆಸ್ ಅನುಮಾನಕ್ಕೆ ಕಾರಣವಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿ, ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ.
ಅನಾರೋಗ್ಯದಿಂದಲೇ ರಾಜೀನಾಮೆ ನೀಡಿರುವುದಾಗಿ ಧನಕರ್ ಹೇಳಿದ್ದರೂ ಕಾಂಗ್ರೆಸ್ ಹಲವು ಪ್ರಶ್ನೆಗಳನ್ನು ಎತ್ತಿದೆ. ಎಲ್ಲೋ ಏನೋ ಆಗಿದೆ ಎಂದು ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.