
New Delhi: ರಾಬರ್ಟ್ ವಾದ್ರಾ ವಿರುದ್ಧ ಇ.ಡಿ. ಚಾರ್ಜ್‌ಶೀಟ್
Friday, July 18, 2025
ಲೋಕಬಂಧು ನ್ಯೂಸ್, ನವದೆಹಲಿ
ಹರ್ಯಾಣದ ಶಿಕೋಜ್‌ಪುರದಲ್ಲಿ ನಡೆದ ಭೂ ವ್ಯವಹಾರದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಹಾಗೂ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಮತ್ತು ಇತರರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಚಾರ್ಜ್ಶೀಟ್ ಸಲ್ಲಿಸಿದೆ.
ವಾದ್ರಾ ಅವರನ್ನು ಕ್ರಿಮಿನಲ್ ಪ್ರಕರಣದಲ್ಲಿ ಹೆಸರಿಸಿ ತನಿಖಾ ಸಂಸ್ಥೆಯೊಂದು ಪ್ರಾಸಿಕ್ಯೂಷನ್ ದೂರು ದಾಖಲಿಸಿರುವುದು ಇದೇ ಮೊದಲ ಬಾರಿಯಾಗಿದೆ. ಹಾಗೆಯೇ 37.64 ಕೋಟಿ ರೂ. ಮೌಲ್ಯದ 43 ಸ್ಥಿರಾಸ್ತಿಗಳನ್ನು ಇ.ಡಿ. ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ.