New Delhi: ಧನಕರ್ ಉತ್ತಮ ಆರೋಗ್ಯವಂತರಾಗಲಿ
Wednesday, July 23, 2025
ಲೋಕಬಂಧು ನ್ಯೂಸ್, ನವದೆಹಲಿ
ಜಗದೀಪ್ ಧನಕರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ಇದೀಗ ಪ್ರಧಾನಿ ನರೇಂದ್ರ ಮೋದಿ ಜಗದೀಪ್ ಧನಕರ್ ಕುರಿತು ಪೋಸ್ಟ್ ಮಾಡಿದ್ದು, ಅದರಲ್ಲಿ ಜಗದೀಪ್ ಧನಕರ್ ಅವರಿಗೆ ಭಾರತದ ಉಪ ರಾಷ್ಟ್ರಪತಿ ಹುದ್ದೆ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಲು ದೇಶಕ್ಕೆ ಸೇವೆ ಸಲ್ಲಿಸಲು ಸಾಕಷ್ಟು ಅವಕಾಶಗಳು ಸಿಕ್ಕಿವೆ.
ಉತ್ತಮ ಆರೋಗ್ಯ ಅವರದ್ದಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.