ಶರಣ್ ವಿರುದ್ಧ ಬಲವಂತದ ಕ್ರಮ ಬೇಡ
Thursday, July 10, 2025
ಲೋಕಬಂಧು ನ್ಯೂಸ್, ಉಡುಪಿ
ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್'ವೆಲ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ದಾಖಲಾದ ಕೇಸಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಅವರ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಶರಣ್ ಪಂಪ್'ವೆಲ್ ಪರವಾಗಿ ವಕೀಲರಾದ ಅರುಣ್ ಶ್ಯಾಮ್ ಮತ್ತು ಸುಯೋಗ್ ಹೇರಳೆ ವಾದಿಸಿದ್ದರು.
ಬ್ರಹ್ಮಾವರ ಬಳಿಯ ಕುಂಜಾಲು ಗೋಹತ್ಯೆ ಮತ್ತು ದನದ ರುಂಡ ಪತ್ತೆ ಪ್ರಕರಣದ ಹಿಂದೆ ಮತೀಯವಾದಿ ಮುಸ್ಲಿಮರ ಕೈವಾಡ ಇದೆ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು.