ಸಿಎಸ್ ಬಗ್ಗೆ ಅವಹೇಳನಕಾರಿ ಮಾತು ಆಡಿಲ್ಲ
Friday, July 4, 2025
ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಎನ್.ರವಿಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರುವದಾಖಲಾಗಿದೆ. ಅದರ ಬೆನ್ನಲ್ಲೇ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.ಈ ಸಂಬಂಧ ಗುರುವಾರ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ರವಿಕುಮಾರ್, ಸಿಎಸ್ ವಿರುದ್ಧ ನಾನು ಯಾವುದೇ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಆದರೆ, ಅವಹೇಳನಕಾರಿ ಪದ ಬಳಸಿದ್ದೇನೆಂದು ಪ್ರಚಾರ ಮಾಡುತ್ತಿರುವುದು ನನಗೆ ಆಘಾತ ಉಂಟು ಮಾಡಿದೆ.
ಅಧಿಕೃತ ಕೆಲಸದ ನಿಮಿತ್ತ ನಾನು ಕಳೆದ ಮೂರು ದಿನಗಳಿಂದ ಹೈದರಾಬಾದ್'ನಲ್ಲಿದ್ದೆ.
ಜೂ.30ರಂದು ನಡೆದಿದ್ದ ಪ್ರತಿಭಟನೆ ವೇಳೆ ಸಿಎಸ್ ಬಗ್ಗೆ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.