ನಾಯಕತ್ವದ ಬಗ್ಗೆ ಚರ್ಚೆ ನಿಗದಿಯಾಗಿಲ್ಲ
Wednesday, July 9, 2025
ಲೋಕಬಂಧು ನ್ಯೂಸ್, ನವದೆಹಲಿ
ಯಾವುದೇ ತರಹದ ನಾಯಕತ್ವದ ಬಗ್ಗೆ ಚರ್ಚೆ ಮಾಡುವ ಸಭೆ ನಿಗದಿಯಾಗಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡುತ್ತಾರೆ ಎನ್ನುವುದು ಕೇವಲ ಊಹಾಪೋಹ ಅಷ್ಟೇ. ನಾಯಕತ್ವ ಬಗ್ಗೆ ಚರ್ಚೆ ಮಾಡುವ ಸಭೆ ನಿಗದಿಯಾಗಿಲ್ಲ.
ಅನುದಾನ ತಾರತಮ್ಯದ ಗಮನ ಸೆಳೆಯಲು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೋಗಿದ್ದಾರೆ ಎಂದು ತಿಳಿಸಿದ್ದಾರೆ.