ಹಬ್ಬಗಳ ಸಹಿತ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ
Wednesday, July 9, 2025
ಲೋಕಬಂಧು ನ್ಯೂಸ್, ಮಂಗಳೂರು
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಹಬ್ಬದಾಚರಣೆ, ಸಭೆ- ಸಮಾರಂಭ, ಮೆರವಣಿಗೆ ಅಥವಾ ಕಾರ್ಯಕ್ರಮ ಆಯೋಜಿಸಲು ಪೊಲೀಸರ ಪೂರ್ವಾನುಮತಿ ಕಡ್ಡಾಯ. ರಾತ್ರಿ 11.30ರ ಬಳಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ ಎಂದು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.ಡಿಜೆ ಬಳಕೆ ಸಂಪೂರ್ಣ ನಿಷಿದ್ಧ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸಿಸಿ ಟಿವಿ, ಸ್ವಯಂಸೇವಕರ ನಿಯೋಜನೆ ಕಡ್ಡಾಯ. ಫ್ಲೆಕ್ಸ್ ಬ್ಯಾನರ್ ಅಳವಡಿಕೆ, ಡ್ರೋನ್ ಬಳಕೆಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲಾಗಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.