rain ರಾಜ್ಯದಲ್ಲಿ ಜು. 24ರ ವರೆಗೂ ಭಾರಿ ಮಳೆ
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಕರ್ನಾಟಕದ ಬಹುತೇಕ ಕಡೆ ಮಳೆ ಹೆಚ್ಚಾಗಿದ್ದು ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 24ರ ವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಶಿವಮೊಗ್ಗ, ಮೈಸೂರು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 3 ದಿನ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ.