rain: ಭಾರಿ ಮಳೆ: ಜು.24ರಂದು ಶಾಲೆ, ಕಾಲೇಜುಗಳಿಗೆ ರಜೆ
Wednesday, July 23, 2025
ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಜುಲೈ 24 ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶಿಸಿದ್ದಾರೆ.ಉಳಿದಂತೆ ಪದವಿ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳು ಎಂದಿನಂತೆ ಕಾರ್ಯಾಚರಿಸಲಿವೆ.