-->
ಧಾರವಾಡದಲ್ಲಿ ‘ಸಿರಿ ಮಿಲ್ಲೆಟ್ ಕೆಫೆ’ ಶುಭಾರಂಭ

ಧಾರವಾಡದಲ್ಲಿ ‘ಸಿರಿ ಮಿಲ್ಲೆಟ್ ಕೆಫೆ’ ಶುಭಾರಂಭ

ಲೋಕಬಂಧು ನ್ಯೂಸ್, ಉಜಿರೆ
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ.ಹೆಗ್ಗಡೆ ಮಾರ್ಗದರ್ಶನದಲ್ಲಿ ಇಲ್ಲಿನ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಪ್ರಪ್ರಥಮವಾಗಿ ಆರಂಭಿಸಲಾದ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ 'ಸಿರಿ ಮಿಲ್ಲೆಟ್ ಕೆಫೆ’ ಜುಲೈ 4ರಂದು ಶುಭಾರಂಭಗೊಂಡಿತು.ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ಸಿರಿ ಸಂಸ್ಥೆ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆ ವಿನೂತನವಾದ ಸಿರಿ ಮಿಲ್ಲೆಟ್ ಕೆಫೆ ಉದ್ಘಾಟಿಸಿ, ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿದ್ದ ಧಾರವಾಡ ಎಸ್.ಡಿ.ಎಂ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ಕುಮಾರ್ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ಪದ್ಮಲತಾ ನಿರಂಜನ್ ದಂಪತಿ ದೀಪ ಬೆಳಗಿಸಿ ಶುಭ ಹಾರೈಸಿದರು.


ಧಾರವಾಡ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಜೀವಂಧರ ಕುಮಾರ್, ಹಣಕಾಸು ನಿರ್ದೇಶಕ ವಿ.ಜಿ.ಪ್ರಭು, ಧಾರವಾಡ ಎಸ್.ಡಿ.ಎಂ ಡೆಂಟಲ್ ಹಾಸ್ಪಿಟಲ್ ಪಿ.ಆರ್.ಒ ನಾಗ್ ಕುಮಾರ್, ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿ.ಸಿ.ಒ ಗಣೇಶ್ ಪ್ರಸಾದ್ ಎಸ್.ಕಾಮತ್, ಧಾರವಾಡ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಧಾರವಾಡ ರಾಯಪುರ ಸಿರಿ ಮಿಲ್ಲೆಟ್ ಘಟಕದ ಸಿಬ್ಬಂದಿ ವರ್ಗದವರು ಇದ್ದರು.

Ads on article

Advertise in articles 1

advertising articles 2

Advertise under the article