-->
ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯಾಗಿದೆ

ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯಾಗಿದೆ

ಲೋಕಬಂಧು ನ್ಯೂಸ್, ಬೆಂಗಳೂರು
ರಾಜ್ಯ ಕಾಂಗ್ರೆಸ್ ಸರಕಾರ ದಿವಾಳಿಯಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುವ ಸ್ಥಿತಿ ಈ ಸರಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಗೃಹಲಕ್ಷ್ಮೀ ಯೋಜನೆಗೆ 3 ತಿಂಗಳಿಂದ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರಕಾರದ ಯಾವುದೇ ಕಾರ್ಯಕ್ರಮ ಕೇವಲ ಪ್ರಚಾರಕ್ಕಾಗಿ ನಡೆಯುವ ಕಾರ್ಯಕ್ರಮಗಳೇ ಹೊರತು ಅದನ್ನು ಕಾರ್ಯರೂಪಕ್ಕೆ ತರುವಂಥ ಯಾವುದೇ ಪ್ರಯತ್ನ ಮಾಡಿಲ್ಲ ಎಂದವರು ಟೀಕಿಸಿದ್ದಾರೆ.

Ads on article

Advertise in articles 1

advertising articles 2

Advertise under the article