-->
Udupi: ವಿವಿಧೆಡೆ ದನಗಳ್ಳತನ: 8 ಮಂದಿಯ ಬಂಧನ

Udupi: ವಿವಿಧೆಡೆ ದನಗಳ್ಳತನ: 8 ಮಂದಿಯ ಬಂಧನ

ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲಾದ್ಯಂತ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಲ್ಲಿ ನಡೆದ ದನ ಕಳ್ಳತನ ಪ್ರಕರಣದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿ ಅವರು ಬಳಸಿದ್ದ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಆ ಪೈಕಿ ಓರ್ವ ಆರೋಪಿ ಮೇಲೆ 35 ಹಾಗೂ ಇನ್ನೊರ್ವನ ಮೇಲೆ 14 ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಮ್‌ ಶಂಕರ್‌ ತಿಳಿಸಿದ್ದಾರೆ.ಇತ್ತೀಚೆಗೆ ಕೋಟ ಪೊಲೀಸ್‌ ಠಾಣೆ ವ್ಯಾಪ್ತಿಯ ಬಿದ್ಕಲಕಟ್ಟೆ ಜಂಕ್ಷನ್‌ನಲ್ಲಿ ದನಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ ಒಂದು ಕಾರು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಆರೋಪಿ ಇಮ್ರಾನ್‌ ವಿರುದ್ಧ ರಾಜ್ಯದ ವಿವಿಧ ಠಾಣೆ ವ್ಯಾಪ್ತಿಯಲ್ಲಿ ದನ ಕಳ್ಳತನಕ್ಕೆ ಸಂಬಂಧಿಸಿದ 35 ಪ್ರಕರಣ, ಇರ್ಷಾದ್‌ ವಿರುದ್ಧ 14 ಪ್ರಕರಣ ದಾಖಲಾಗಿದೆ.


ಬೈಂದೂರು ಪೊಲೀಸ್‌ ಠಾಣೆ ವ್ಯಾಪ್ತಿಯ ದನ ಕಳ್ಳತನ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿ, 3 ವಾಹನ ವಶಕ್ಕೆ ಪಡೆಯಲಾಗಿದೆ.


ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಒಂದು ವಾಹನ ವಶಪಡಿಸಿಕೊಳ್ಳಲಾಗಿದೆ.


ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ, ಒಂದು ಕಾರು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.


ಗೋ ಕಳ್ಳತನ ಪ್ರಕರಣವನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ದನ ಕಳವು ಪ್ರಕರಣ ಭೇದಿಸಲು ವಿವಿಧ ತಂಡಗಳನ್ನು ರಚಿಸಲಾಗಿದೆ. ಗೋಗಳ್ಳತನ ನಡೆಯದಂತೆಯೂ ಹಲವು ಕ್ರಮ ತೆಗೆದುಕೊಂಡಿದ್ದೇವೆ ಎಂದು ಎಸ್‌ಪಿ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article