-->
Udupi: ಚುನಾವಣೆಗೆ ಲಂಚದ 'ಸಹಕಾರ' ಬೇಡಿಕೆ: ಈರ್ವರು ಲೋಕಾಯುಕ್ತ ಬಲೆಗೆ

Udupi: ಚುನಾವಣೆಗೆ ಲಂಚದ 'ಸಹಕಾರ' ಬೇಡಿಕೆ: ಈರ್ವರು ಲೋಕಾಯುಕ್ತ ಬಲೆಗೆ

ಲೋಕಬಂಧು ನ್ಯೂಸ್, ಉಡುಪಿ
ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಸಲು ಲಂಚ ಪಡೆದ ಆರೋಪದಡಿ ಉಡುಪಿ ಜಿಲ್ಲಾ ಸಹಕಾರ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪ ನಿರ್ದೇಶಕಿ ರೇಣುಕಾ ಹಾಗೂ ಪ್ರಥಮ ದರ್ಜೆ ಸಹಾಯಕ ಜಯರಾಮ್ ಗುರುವಾರ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.ಈ ಇಬ್ಬರು ಆರೋಪಿಗಳು ಸೌಹಾರ್ದ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ನಡೆಸಿಕೊಡಲು ರೂ. 5 ಸಾವಿರ ರೂ.ನಂತೆ ಒಟ್ಟು 10 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.


ಲಂಚ ನೀಡಲು ಒಪ್ಪದ ಶಾಂತಿನಿಕೇತನ ಸೌಹಾರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ನರೇಂದ್ರ ಅವರು ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.


ಅದರಂತೆ ರೇಣುಕಾ ಉಡುಪಿಯಲ್ಲಿರುವ ತನ್ನ ಕಚೇರಿಯಲ್ಲಿ ಲಂಚದ ಹಣ ಪಡೆಯುತ್ತಿರುವ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article