
Udupi: ಅಲೆವೂರು ಶ್ರೀಪತಿ ಆಚಾರ್ಯಗೆ ಮರಣೋತ್ತರ ಪ್ರಶಸ್ತಿ
Wednesday, July 23, 2025
ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ನಡೆದ ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವ ಸಂದರ್ಭದಲ್ಲಿ ಪ್ರಸಿದ್ಧ ವಕೀಲರಾಗಿದ್ದ ಅಲೆವೂರು ಶ್ರೀಪತಿ ಆಚಾರ್ಯ ಅವರಿಗೆ ಮರಣೋತ್ತರವಾಗಿ ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನೀಡಿದರು. ದಿ.ಆಚಾರ್ಯರ ಪತ್ನಿ ಪ್ರಶಸ್ತಿ ಸ್ವೀಕರಿಸಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಹಾಗೂ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿದ್ದರು.